Friday, January 05, 2007

ಸಂಸ್ಕೃತ ಸುಭಾಷಿತಗಳು - ಭಾಗ ೧

ಸರಸ್ವತಿಯೇ, ನಿನ್ನ ಬಳಿ ವಿದ್ಯೆಯೆಂಬ ಅಪರೂಪದ ಭಂಡಾರವೊಂದಿದೆ.
ಬೇರೆಲ್ಲ ಸಂಪತ್ತುಗಳೂ ಹಂಚಿಕೊಂಡಷ್ಟೂ ಕ್ಷೀಣಿಸುತ್ತವೆ.
ಆದರೆ (ನಿನ್ನ ಬಳಿಯಿರುವ) ವಿದ್ಯೆಯೆಂಬ ಸಂಪತ್ತು ಮಾತ್ರ
ಹಂಚಿಕೊಂಡಷ್ಟೂ ವೃದ್ಧಿಸುತ್ತದೆ ಮತ್ತು ಗೋಪ್ಯವಾಗಿಟ್ಟಷ್ಟೂ ಕ್ಷೀಣಿಸುತ್ತದೆ!
- ಸಂಸ್ಕೃತ ಸುಭಾಷಿತ


ಕಾದ ಕಾವಲಿಯ ಮೇಲೆ ಬಿದ್ದ ನೀರ ಹನಿಯೊಂದು ಆವಿಯಾಗಿ ತನ್ನ ಸ್ವರೂಪವನ್ನೇ ಕಳೆದುಕೊಳ್ಳುತ್ತದೆ.
ಕಮಲದೆಲೆಯ ಮೇಲೆ ಬಿದ್ದ ಅದೇ ನೀರ ಹನಿಯು ಸೂರ್ಯನ ಬೆಳಕಿನಲ್ಲಿ ಮುತ್ತಿನಂತೆ ಕಂಗೊಳಿಸುತ್ತದೆ.
ಸ್ವಾತಿ ನಕ್ಷತ್ರದಲ್ಲಿ ಕಪ್ಪೆಚಿಪ್ಪನ್ನು ಪ್ರವೇಶಿಸಿದ ಅದೇ ನೀರ ಹನಿಯು ಅನರ್ಘ್ಯವಾದ ಮುತ್ತೇ ಆಗುತ್ತದೆ.
ಹೀಗೆ ಉತ್ತಮ, ಮಧ್ಯಮ ಮತ್ತು ಅಧಮವೆಂಬ ಮೂರು ಗುಣಗಳೂ ಸಹವಾಸದಿಂದ ಉಂಟಾಗುತ್ತವೆ!
- ಭರ್ತೃಹರಿಯ ನೀತಿಶತಕ


ಕಾಗೆ ಕಪ್ಪು. ಕೋಗಿಲೆ ಕೂಡಾ ಕಪ್ಪು. ಹಾಗಾದರೆ ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ ತಿಳಿಯುವುದು ಹೇಗೆ?
ಬಹಳ ಸುಲಭ; ವಸಂತಮಾಸ ಬಂದೊಡನೆ ಕಾಗೆ ಕಾಗೆಯೇ, ಕೋಗಿಲೆ ಕೋಗಿಲೆಯೇ!
(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್ತದೆ. ಕಾಗೆಗದು ಅಸಾಧ್ಯ ಎಂಬರ್ಥದಲ್ಲಿ)
- ಸಂಸ್ಕೃತ ಸುಭಾಷಿತ


ಲಕ್ಷ್ಮಣ, ಲಂಕೆಯು ಸುವರ್ಣಮಯ ರಾಜ್ಯವೇ ಆದರೂ ಅದು ನನ್ನನ್ನು ಆಕರ್ಷಿಸುತ್ತಿಲ್ಲ.
(ಏಕೆಂದರೆ) ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತಲೂ ಕೂಡಾ ಮಿಗಿಲಾದುವು!
- ವಾಲ್ಮೀಕಿ ರಾಮಾಯಣ (ರಾಮನು ರಾವಣನನ್ನು ಸಂಹರಿಸಿದ ಬಳಿಕ ಲಕ್ಷ್ಮಣನಿಗೆ ಹೇಳುವ ಮಾತು)


ಹೇಗೆ ಹಾಲು, ಮೊಸರುಗಳಿಗಿಂತ ತಡವಾಗಿ ಹುಟ್ಟಿದರೂ ತುಪ್ಪವು ಹಾಲು, ಮೊಸರುಗಳಿಗಿಂತ ಶ್ರೇಷ್ಠ ಎನಿಸಿಕೊಳ್ಳುವುದೋ,
ಹಾಗೆಯೇ ಹಿರಿತನವೆನ್ನುವುದು ಉತ್ತಮ ಗುಣಗಳಿಂದಾಗಿ ಲಭ್ಯವಾಗುವುದೇ ಹೊರತು ಕೇವಲ ವಯಸ್ಸಿನಿಂದಲ್ಲ.
- ಸಂಸ್ಕೃತ ಸುಭಾಷಿತ

6 comments:

Anonymous said...

ನಮಸ್ಕಾರ ಶ್ಯಾಮ್ ಅವರಿಗೆ . . .ಒಳ್ಳೇಯ ಸಂಸ್ಕೃತ ಸುಭಾಷಿತ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು . . .

surya said...

ಶ್ಯಾಮ್ ಅವರಿಗೆ ನಮಸ್ಕಾರ,ನೀವು ಒಳ್ಳೆಯ ಸಂಸ್ಕೃತ ಸುಭಾಷಿತಗಳನ್ನು ಅನುವಾದಿಸಿದ್ದೀರಿ. ಧನ್ಯವಾದಗಳು. ಮೂಲ ಸಂಸ್ಕೃತವನ್ನು ನೀಡಿರಿ.

Harisha - ಹರೀಶ said...

ಶ್ಯಾಮ್ ಕಿಶೋರ್ ಅವರೇ, ಉತ್ತಮ ಕೆಲಸ ಮಾಡುತ್ತಿದ್ದೀರಿ.. ಆದರೆ ಮೂಲ ಸಂಸ್ಕೃತ ಶ್ಲೋಕವನ್ನೂ ಕೊಟ್ಟರೆ ಚೆನ್ನಾಗಿತ್ತು.

Subhashita Manjari said...

ಉತ್ತಮವಾದ ಲೇಖನ!
ನೀವು ಸುಭಾಷಿತಮಂಜರಿಯನ್ನು ಇಷ್ಟ ಪಡುತ್ತೀರೆಂದು ಭಾವಿಸುತ್ತೇನೆ.

ಧನ್ಯವಾದಗಳು

kavya gowda said...

vry meningful i really liked it

ನಂದಿನಿ said...

ನಿಮ್ಮ ಲೇಖನ ತುಂಬಾ ಖುಷಿ ಕೊಟ್ಟಿದೆ. ಹೀಗೇ ಮುಂದುವರೆಸಿ. ಯುವ ಜನತೆಗೆ ಬಹಳ ಸಹಾಯವಾಗುತ್ತೆ ನಿಮ್ಮಿಂದ...